9:36 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ರಾಜ್ಯ ಪತ್ರಕರ್ತರ ಸಂಘದಿಂದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್: ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಾಳೆಯಿಂದ ಆರಂಭ

04/01/2024, 11:04

ಮಂಗಳೂರು(reporterkarnataka.com): ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024 ಕ್ರಿಕೆಟ್ ಪಂದ್ಯಾಟ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ.5,6 ಮತ್ತು 7ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೂರ್ನಮೆಂಟ್
ನಲ್ಲಿ ಒಟ್ಟು 24 ತಂಡಗಳು ಭಾಗವಹಿಸಲಿವೆ. ಜ.5ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಕಾರಿ ಸಮಿತಿ ಸಭೆ ಮತ್ತು 11 ಗಂಟೆಗೆ ಕೆಯುಡಬ್ಲ್ಯಜೆ
90ನೇ ಸರ್ವ ಸದಸ್ಯರ ಮಹಾಸಭೆ ಸಹ್ಯಾದ್ರಿ ಕಾಲೇಜು ಆಡಿಟೋರಿಯಂನಲ್ಲಿ ನಡೆಯಲಿದೆ.
ಸಂಜೆ 4 ಗಂಟೆಗೆ ಸಹ್ಯಾದ್ರಿ ಸ್ವಾಗತ ದ್ವಾರದಿಂದ ಕ್ರೀಡಾಂಗಣಕ್ಕೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ನಾನಾ ಜಿಲ್ಲಾ ತಂಡಗಳ ಆಟಗಾರರು ತಮ್ಮ ಜಿಲ್ಲೆಯ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಧರಿಸಿ ಹೆಜ್ಜೆ ಇರಿಸಲಿದ್ದಾರೆ. ಸಂಜೆ 5 ಗಂಟೆಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಕ್ರಿಕೆಟ್
ಪಂದ್ಯಾವಳಿಗೆ ಚಾಲನೆ ನೀಡಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕ್ಯಾ.ಎಂ.ವಿ.ಪ್ರಾಂಜಲ್ ಗೌರವಾರ್ಥದ ಪೆವಿಲಿಯನ್ ಉದ್ಘಾಟಿಸುವರು.
ಸೌಹಾರ್ದದ ಪಂದ್ಯ: ಮೊದಲ ದಿನ ಎರಡು ತಂಡಗಳ ನಡುವೆ ಸೌಹಾರ್ದ ಪಂದ್ಯ ನಡೆಯಲಿದೆ. ಬಳಿಕ ನಾನಾ ಜಿಲ್ಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಎರಡು ದಿನಗಳ ಕಾಲ ಲೀಗ್ ಮಾದರಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ಸಮಾರೋಪ ಸಮಾರಂಭ: ಜ.7ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಕ್ರೀಡಾ ಸಚಿವರ ನಾಗೇಂದ್ರ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಬಹುಮಾನ ವಿತರಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು