6:13 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಮೊದಲ ಘಟನೆ: ಎಡಿಜಿಪಿ ಅಮೃತ್‌ ಪೌಲ್ ಬಂಧನ

04/07/2022, 20:21

ಬೆಂಗಳೂರು(reporterkarnataka.com): ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಡಿಜಿಪಿ ಬಂಧನವಾಗಿದೆ. ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್‌ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. 

ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಲ್ಲಿ ಕೆಲವರು ವಿಚಾರಣೆ ವೇಳೆ ಅಮೃತ್‌ ಪೌಲ್‌ ಹೆಸರನ್ನು ಹೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಎಡಿಜಿಪಿ ಅವರನ್ನು ಇಂದು ಮತ್ತೆ ವಿಚಾರಣೆಗೆ ಕರೆದಿದ್ದರು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್‌ ಪೌಲ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂ. ಡೀಲ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಈಗ ಮತ್ತಷ್ಟು ವಿಚಾರಣೆ ನಡೆಸಲು ಬಂಧಿಸಿದೆ. 

……

545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿತ್ತು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು.

ಆರೋಪ ಏನು?

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್‌ ಪೌಲ್‌ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಇಂದು ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್‌ ಪೌಲ್‌ ಅವರನ್ನು ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು