9:45 AM Sunday7 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹರ್ಷ

27/11/2024, 09:18

ಮಂಗಳೂರು(reporterkarnataka.com): ದ.ಕ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗೂ ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ಜನತೆ ಒಪ್ಪಿಕೊಂಡಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ವಿಪಕ್ಷಗಳ ವಕ್ಫ್, ರೇಷನ್ ಕಾರ್ಡ್ ಗೊಂದಲ ಕುರಿತ ಅಪಪ್ರಚಾರಗಳಿಗೆ ಪ್ರಬುದ್ಧ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪುನಶ್ಚೇತನ ಮತ್ತು ಮುಂಬರುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ಮತ್ತು ಈ ಫಲಿತಾಂಶ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈಯನ್ನು ಮತ್ತಷ್ಟು ಬಲಪಡಿಸಿದೆ. ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ಪಕ್ಷದ ಮುಖಂಡರು ಹಾಗು ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು
ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು