5:39 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ರಾಜಕೀಯ ದ್ವೇಷಕ್ಕಾಗಿ ಪಠ್ಯ ಪರಿಷ್ಕರಣೆ: ಶಾಸಕ ವೇದವ್ಯಾಸ ಕಾಮತ್ ಅಭಿಮತ

17/06/2023, 20:28

ಮಂಗಳೂರು(reporterkarnataka.com): ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತಿಯೊಂದು ನಿರ್ಧಾರವನ್ನೂ ರಾಜಕೀಯ ದ್ವೇಷದಿಂದಲೇ ಮಾಡುತ್ತಿದ್ದು, ಇದೀಗ ಪಠ್ಯ ಪರಿಷ್ಕರಣೆ ಮಾಡುವ ಮೂಲಕ ದೇಶದ ಸಾಮಾಜಿಕ ಹರಿಕಾರರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಣ ಕ್ಷೆತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂಬ ದೃಷ್ಟಿಕೋನದಿಂದ ಬಿಜೆಪಿ ಸರಕಾರದ ಅವಧಿಯಲ್ಲಿ ಅನಗತ್ಯ ವಿಚಾರಗಳನ್ನು ಕೈ ಬಿಟ್ಟು ಒಳ್ಳೆಯ ವಿಚಾರಗಳನ್ನು ಪಠ್ಯಕ್ಕೆ ಸೇರಿಸಲಾಗಿತ್ತು. ಆದರೆ ದೇಶ ಪ್ರೇಮದ ಬಗ್ಗೆ ಒಲವಿಲ್ಲದ ಕಾಂಗ್ರೆಸ್ ಗೆ ಇದನ್ನು ಸಹಿಸಲು ಸಾಧ್ಯವಾಗದೆ ಇದೀಗ ಪಠ್ಯ ಪರಿಷ್ಕರಣೆಗೆ ಕೈ ಹಾಕಿದ್ದಾರೆ ಎಂದು ದೂರಿದರು.
‘ಭಾರತ ಮಾತೆಯ ಅಮೃತ ಪುತ್ರರು’ ಎಂಬ ಸೂಲಿಬೆಲೆ ಅವರ ಪಠ್ಯ ಮಕ್ಕಳಲ್ಲಿ ದೇಶಪ್ರೇಮವನ್ನು ಬೆಳೆಸುವ ವಿಷಯವಾಗಿತ್ತು. ಸಾವರ್ಕರ್, ಸುಖದೇವ್, ಭಗತ್‍ಸಿಂಗ್ ಅವರ ಸ್ವಾತಂತ್ರ್ಯ ಹೋರಾಟ, ಜೀವನ ಕಥನಗಳನ್ನು ಮಕ್ಕಳಿಗೆ ತಿಳಿಸುವ ಪಠ್ಯವಾಗಿತ್ತು. ಇನ್ನು `ನಿಜವಾದ ಆದರ್ಶ ಪುರುಷ ಯಾರಾಗಬೇಕು’ ಎಂಬ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣದ ಪಠ್ಯ ಅಳವಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರ ಅದರಲ್ಲೂ ರಾಜಕೀಯ ಹುಡುಕಿ, ಈ ವಿಷಯಗಳಿಗೆ ಕತ್ತರಿ ಹಾಕಿ ಮಕ್ಕಳ ಪಠ್ಯಲ್ಲಿ ಕಾಂಗ್ರೆಸ್ ಮನಸ್ಥಿತಿಯ ವಿಚಾರಧಾರೆಗಳನ್ನು ತುರುಕಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಶಿಕ್ಷಣ ಕ್ಷೆತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಪಠ್ಯ ಪರಿಷ್ಕರಣೆ ಮಾಡುತ್ತಿರುವುದು ಖಂಡನೀಯ. ನಮ್ಮ ಅವಧಿಯಲ್ಲಿ ಮೊದಲಿನ ತಪ್ಪುಗಳನ್ನು ತಿದ್ದುವ ಕೆಲಸ ಆಗಿತ್ತು. ಈಗ ಬಿಜೆಪಿ, ಆರೆಸ್ಸೆಸ್ ಮೇಲಿನ ದ್ವೇಷದಿಂದ ಪಠ್ಯ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಸಮಗ್ರವಾಗಿ ವಿಮರ್ಶಿಸಿ ಮಾಡಬೇಕಿತ್ತು. ಆದರೆ ರಾಜಕೀಯ ಕಾರಣಕ್ಕೋಸ್ಕರ ಬದಲಾವಣೆ ಮಾಡುವುದು ಅಕ್ಷ್ಯಮ್ಯ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು