7:33 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ !

10/06/2021, 05:42

ಬೆಂಗಳೂರು(Reporter Karnataka News) ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್‌ ದರ ಏರಿಕೆ ಮಾಡಿ ಮತ್ತೊಂದು ಶಾಕ್‌ ನೀಡಿದೆ.

ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 30 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆ ಸರಾಸರಿ ಶೇ. 3.84 ರಷ್ಟು ವಿದ್ಯುತ್‌ ದುಬಾರಿಯಾಗಿದೆ. ಏಪ್ರಿಲ್‌ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಮುಂದಿನ ಮೀಟರ್ ರೀಡಿಂಗ್‌ ವೇಳೆ ಈ ದರಗಳು ಅನ್ವಯವಾಗಲಿವೆ.
ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಕೊರೊನಾ ಕಾರಣಕ್ಕೆ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲಿ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ಉಪಚುನಾವಣೆ, ಪಂಚಾಯತ್‌ ಚುನಾವಣೆ ಮತ್ತು ಕೊರೊನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು