3:14 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ

27/10/2024, 18:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡೀ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅಕ್ಟೋಬರ್ 28ರಂದು ನಡೆಯುತ್ತಿರುವ ಚುನಾವಣೆ ನಡೆಯಲಿದ್ದು,
ನಂಜನಗೂಡು ಶಾಖೆಯ ಸರ್ಕಾರಿ ನೌಕರರ ಸಂಘಕ್ಕೂ ನಾಳೆ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿದೆ.
ನಂಜನಗೂಡು ಶಾಖೆಯ ಚುನಾವಣೆ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.


ಚುನಾವಣಾಧಿಕಾರಿಯಾಗಿ ಬಾಲಸುಬ್ರಹ್ಮಣ್ಯ ಅವರು ಕಾರ್ಯನಿರ್ವಹಿಸುತ್ತಿದ್ದು ವಿವಿಧ ಕ್ಷೇತ್ರಗಳಿಂದ 31 ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಈಗಾಗಲೇ 17 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. ಉಳಿದಂತೆ 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು.
ಯಾವುದೇ ಸಾರ್ವತ್ರಿಕ ಚುನಾವಣೆಗಿಂತ ಕಮ್ಮಿ ಇಲ್ಲವೆಂಬಂತೆ ಪೂರ್ವ ತಯಾರಿ ನಡೆಸಿಕೊಂಡು ನಾಮಪತ್ರವನ್ನು ಸಹ ಸಲ್ಲಿಸಿದ್ದ ಅಭ್ಯರ್ಥಿಆಕಾಂಕ್ಷಿಗಳಿಗೆ ಇದೀಗ ಬಿಗ್ ಶಾಕ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಪ್ರತಿಷ್ಠೆಗೆ ನಂಜನಗೂಡಿನಲ್ಲಿ ಇಎಸ್ಐ ಸಿಬ್ಬಂದಿಗಳಿಗೆ ಮೋಸವಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮತದಾನದ ಪಟ್ಟಿಯಿಂದಲೇ ಇಎಸ್ಐ ಸಿಬ್ಬಂದಿಗಳ ಹೆಸರು ರಿಜೆಕ್ಟೆಡ್ ಆಗಿದೆ. ಕೂಡಲೇ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ನಂಜನಗೂಡು ನ್ಯಾಯಾಲಯ ತಡೆಯಾಜ್ಞೆ ನೀಡಿ ಚುನಾವಣೆಗೆ ಬ್ರೇಕ್ ಹಾಕಿದೆ. ನಂಜನಗೂಡು ತಾಲೂಕಿನಲ್ಲಿ 31 ನಿರ್ದೇಶಕರ ಆಯ್ಕೆಗೆ ನಡೆಯಬೇಕಿದ್ದ ಚುನಾವಣೆ ಇದಾಗಿದೆ.
ಕಳೆದ ಒಂದು ವಾರಗಳಿಂದ ಚುನಾವಣಾ ಪೂರ್ವ ತಯಾರಿಯಲ್ಲಿ 31 ಜನ ನಿರ್ದೇಶಕರ ಪೈಕಿ ಅವಿರೋಧವಾಗಿ ವಿವಿಧ ಇಲಾಖೆಗಳಿಂದ ಆಯ್ಕೆಯಾಗಿದ್ದ 17 ಜನ ನಿರ್ದೇಶಕರು ಇದ್ದಾರೆ.
ಸರ್ಕಾರಿ ನೌಕರರ ಸಂಘದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿವೃತ್ತ ಅಧಿಕಾರಿ ಬಾಲಸುಬ್ರಹ್ಮಣ್ಯ ಗೆ ನ್ಯಾಯಾಲಯದ ನೋಟೀಸ್
ತಲುಪಿದೆ. ಸರ್ಕಾರಿ ಸಂಘದ ಬೈಲಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕ ಚುನಾವಣಾ ನೀತಿ ವಿರುದ್ಧ ಇಎಸ್ಐ ಸಿಬ್ಬಂದಿಗಳ ಅಸಮಾಧಾನ ವ್ಯಕ್ತಪಡಿಸಿದ್ದರು.
ಸಂಘದ ಬೈಲಾ ನಿಯಮಾವಳಿ ಉಲ್ಲಂಘಸಿ, ಅಧಿಕಾರ ದುರುಪಯೋಗ ಮಾಡಿಕೊಂಡು, ತಮ್ಮ ಅನುಕೂಲಕ್ಕೆ ತಕ್ಕಂತೆ ಮತಕ್ಷೇತ್ರಗಳ ಹಂಚಿಕೆ ಮಾಡಿದ್ದಾರೆಂದು ಆರೋಪಸಿ ಇಎಸ್ಐ ನೌಕರ ಹರೀಶ್ ಕುಮಾರ್ ಕೋರ್ಟ್ ಮೊರೆ ಹೋಗಿದ್ದರು.
ರಾಜ್ಯಾಧ್ಯಕ್ಷ ಷಡಕ್ಷರಿ, ಜಿಲ್ಲಾಧ್ಯಕ್ಷ ಗೋವಿಂದರಾಜು, ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಪ್ರಸನ್ನ ಹಾಗೂ ತಾಲ್ಲೂಕು ಚುನಾವಣಾಧಿಕಾರಿಗಳಿಗೆ ಕೊರ್ಟನಿಂದ ಸಮನ್ಸ್ ಜಾರಿ ಮಾಡಲಾಗಿದೆ. ಅರ್ಜಿದಾರ ಎನ್ ಹರೀಶ್ ಕುಮಾರ್ ಪರ ವಕೀಲ ಗೋಳೂರು ಆರ್. ಪ್ರಸನ್ನ ವಾದ ಮಂಡಿಸಿದ್ದರು.
ಚುನಾವಣೆಗೆ ತಡೆಯಾಜ್ಞೆ ನೀಡಿದ ನ್ಯಾಯಾಲಯದಲ್ಲಿ ನವೆಂಬರ್ 21ಕ್ಕೆ ವಿಚಾರಣೆ ಮುಂದೂಡಿದೆ.
ಘಟನೆಗೆ ಸಂಬಂಧಿಸಿದಂತೆ ಚುನಾವಣೆ ಅಧಿಕಾರಿ ಬಾಲಸುಬ್ರಹ್ಮಣ್ಯ ಅವರು ಕೋರ್ಟ್ ಅಮೀನ್ ಅವರಿಂದ ತಡೆಯಾಜ್ಞೆ ಆದೇಶ ಪ್ರತಿಯನ್ನು ಪಡೆದು ಮಾತನಾಡಿದರು.
ಅರ್ಜಿದಾರ ಎನ್ ಹರೀಶ್ ಕುಮಾರ್ ಪರ ವಕೀಲರಾದ ಆರ್ ಪ್ರಸನ್ನ ಅವರು ಮಾತನಾಡಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು