ಇತ್ತೀಚಿನ ಸುದ್ದಿ
ರಾಜ್ಯ ಉಪ ಚುನಾವಣೆ: ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸದಂತೆ ಚುನಾವಣಾ ಆಯೋಗ ಖಡಕ್ ಸೂಚನೆ
09/10/2021, 22:20
ಬೆಂಗಳೂರು(reporterkarnataka.com): ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 30, 2021ರಂದು ಮತದಾನ ನಡೆಯಲಿದ್ದು, ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗ ಖಡಕ್ ಆದೇಶ ನೀಡಿದೆ.
ಮುಖ್ಯ ಚುನಾವಣಾಧಿಕಾರಿಗಳು ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚನಾವಣೆ ನಿಮಿತ್ತ ಎಕ್ಸಿಟ್ ಪೋಲ್ ಪ್ರಸಾರ ಕುರಿತು ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆ ದಿನಾಂಕ 08-10-2021ರಂದು ಭಾಗ-3, ನಂ.827ರಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.