9:36 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ರಮಾನಾಥ ರೈ, ಸೊರಕೆ, ಲೋಬೊಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತ

06/03/2023, 18:50

ಮಂಗಳೂರು(reporterkarnataka.com): ರಾಜ್ಯದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಕರಾವಳಿ ಜಿಲ್ಲೆಯಲ್ಲಿ ಚುನಾವಣೆ ಬಿಸಿ ಜತೆಗೆ ತಾಪಮಾನ ಕೂಡ ಏರಲಾರಂಭಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಶಾಸಕರನ್ನು ಮತ್ತೆ ಅಖಾಡಕ್ಕಿಳಿಸಲು ಆಡಳಿತರೂಢ ಬಿಜೆಪಿ ಸಿದ್ಧತೆ ನಡೆಸುತ್ತಿದ್ದರೆ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆದಿದೆ. ಈ ಹೋರಾಟದ ನಡುವೆ ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ ಹಾಗೂ ಜೆ. ಆರ್. ಲೋಬೊ ಅವರಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ. ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಜಾತ್ಯತೀತತೆ ಹಾಗೂ ಅವರಿಗೆ ಪಕ್ಷದ ಮೇಲಿರುವ ಅಪಾರವಾದ ನಿಷ್ಠೆ ಯನ್ನು ಪರಿಗಣಿಸಿ, ಕೊನೆಯ ಅವಕಾಶ ಎಂಬ ಸೂತ್ರದಡಿಯಲ್ಲಿ ಕಾಂಗ್ರೆಸ್ ಟಿಕೆಟ್ ದೊರಕಲಿದೆ. ಹಾಗೆ ಇನ್ನೊರ್ವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರಿಗೂ ನೆರೆಯ ಉಡುಪಿ ಜೆಲ್ಲೆಯ ಕಾಪು ಕ್ಷೇತ್ರದಿಂದ ಕೊನೆಯ ಅವಕಾಶ ಎಂಬ ಘೋಷ ವಾಕ್ಯದಡಿ ಪಕ್ಷ ಟಿಕೆಟ್ ನೀಡಲಿದೆ ಎಂದು ವಿಶ್ವಸನೀಯ ಮೂಲಗಳು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿವೆ. ಇನ್ನು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೂರು ಕ್ಷೇತ್ರಗಳ ಪೈಕಿ ಒಂದಾದ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಭಾರಿ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಜೆ. ಆರ್. ಲೋಬೊ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರ ನಡುವೆ ಟಿಕೆಟ್ ಗಾಗಿ ನೇರ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ಕ್ರೈಸ್ತ ಸಮುದಾಯದ ಇನ್ನೋರ್ವ ಯುವ ಮುಖಂಡ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಇದೇನಿದ್ದರೂ ಲೋಬೊ ಅವರಿಗೆ ಈ ಬಾರಿ ಟಿಕೆಟ್ ಬಹುತೇಕ ಖಚಿತ ಎಂದು ತಿಳಿದು ಬಂದಿದೆ. ಲೋಬೊ ಅವರ ಮಂಗಳೂರು ಸ್ಮಾರ್ಟ್ ಸಿಟಿ ಪ್ರಸ್ತಾವನೆ ಸೇರಿದಂತೆ ಅವರು ಮಾಡಿದ ಅಭಿವೃದ್ಧಿ ಕಾರ್ಯವನ್ನು ಪರಿಗಣಿಸಿ ಕಾಂಗ್ರೆಸ್ ವರಿಷ್ಠರು ಮತ್ತೊಮ್ಮೆ ಲೋಬೊ ಅವರಿಗೆ ಅವಕಾಶ ನೀಡಲಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಆದರೆ ಇದೇನಿದ್ದರೂ ರಾಜಕೀಯದಲ್ಲಿ ಯಾವುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ. ಇಂದು ಮಿತ್ರರಾಗಿದ್ದವರು ನಾಳೆ ಶತ್ರುಗಳಾಗಬಹುದು. ಹಾಗೆ ಶತ್ರುಗಳು ಮಿತ್ರರಾಗಬಹುದು. ಹಾಗಿರುವಾಗ
ಕೊನೆಯ ಹಂತದಲ್ಲಿ ಪ್ರಮುಖ ಬೆಳವಣಿಗೆ ನಡೆದರೆ ಮಾತ್ರ ಈ ಮೂವರು ಅಭ್ಯರ್ಥಿ ಗಳು ಬದಲಾಗುವ ಸಾಧ್ಯತೆ ಮಾತ್ರ ಇರುವುದು. ರಾತ್ರಿ ವೇಳೆ ಒಬ್ಬರ ಹೆಸರಿನಲ್ಲಿದ್ದ ಬಿ ಫಾರಂ ಬೆಳಗ್ಗೆ ಆಗುವಾಗ ಇನ್ನೊಬ್ಬರ ಹೆಸರಿಗೆ ಬದಲಾದ ಉದಾಹರಣೆ ಕೂಡ ರಾಜಕೀಯ ರಂಗದಲ್ಲಿ ಸಾಕಷ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು