6:26 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ರಾಜ್ಯ ವಿಧಾನ ಸಭೆ ಚುನಾವಣೆ: ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲು ನೋಡಲ್ ಅಧಿಕಾರಿಗಳಿಗೆ ಸೂಚನೆ

05/04/2023, 21:51

ಮಂಗಳೂರು(reporterkarnataka.com): ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಗಮನಹರಿಸಿ, ಅವುಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿರ್ದೇಶನ ನೀಡಿದರು.
ಅವರು ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆಗೆ ನಿಯೋಜನೆಗೊಂಡಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಅಧಿಕಾರಿಗಳು ಕರ್ತವ್ಯ ಹಾಗೂ ತಾವು ವಹಿಸಬೇಕಾದ ಪಾತ್ರದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರಬೇಕು, ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಚಾರ ಕಾರ್ಯಗಳು ಬಿರುಸು ಪಡೆಯುತ್ತವೆ ಈ ಸಂಬಂಧ ನಿಯೋಜಿತ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಆಗ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಸಿದ್ಧತೆಯನ್ನು ಈಗಲೇ ಮಾಡಿಟ್ಟುಕೊಳ್ಳಬೇಕು, ಸಿವಿಜಿಲ್, ಸುವಿಧಾ ಸೇರಿದಂತೆ ಮುಖ್ಯವಾಗಿ ತಕ್ಷಣದಲ್ಲೇ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತ ವಹಿಸಬೇಕು ಯಾವುದೇ ದೂರು ದಾಖಲಾದ ಕೂಡಲೇ ಅದಕ್ಕೆ ಪ್ರತಿಕ್ರಿಯೆ ನೀಡಲು ಸನ್ನದ್ಧರಾಗಬೇಕು, ಮಂಗಳೂರು ವಾಯು ಹಾಗೂ ಜಲ ಮಾರ್ಗ ಹೊಂದಿರುವ ಕಾರಣ ಹೊರಗಿನಿಂದ ಬರಬಹುದಾದ ವಸ್ತುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸಿಪಿ ಅಂಶು ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ಸೇರಿದಂತೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು