8:31 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 581 ಮಂದಿ ಸ್ಪರ್ಧೆ!: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಮಾನ ಮನಸ್ಕರು!

04/05/2023, 21:14

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿ ಗಳ ಪೈಕಿ 581 ಮಂದಿ ಅಭ್ಯರ್ಥಿ ಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಆಡಳಿತರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜನತಾ ದಳದ ಅಭ್ಯರ್ಥಿ ಗಳು ಕೂಡ ಸೇರಿದ್ದಾರೆ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 581 ಆಭ್ಯರ್ಥಿಗಳಲ್ಲಿ 404 ಮಂದಿ ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 49 ಅಭ್ಯರ್ಥಿ ಗಳು ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಎದುರಿಸುತ್ತಿದ್ದಾರೆ. ಬಿಜೆಪಿಯ 96 ಅಭ್ಯರ್ಥಿ ಗಳು, ಕಾಂಗ್ರೆಸ್ ನ 122 ಅಭ್ಯರ್ಥಿಗಳು, ಜನತಾ ದಳದ 70 ಅಭ್ಯರ್ಥಿ ಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವೆಂದರೆ ಜನಸಾಮಾನ್ಯರ ಪಕ್ಷ ಎಂದು ಕರೆಸಿಕೊಳ್ಳುವ ಆಮ್ ಆದ್ಮಿ ಪಾರ್ಟಿಯು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಪರಾಧ ಪ್ರಕರಣ ಎದುರಿಸುತ್ತಿರುವ 581 ಮಂದಿ ಅಭ್ಯರ್ಥಿ ಗಳ Shwe ಒಬ್ಬರು ಅತ್ಯಾಚಾರ ಪ್ರಕರಣ, 8 ಮಂದಿ ಕೊಲೆ ಪ್ರಕರಣ, 35 ಮಂದಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದಾರೆ ಎನ್ನುವುದು ಅವರ ನಾಮಪತ್ರದ ಮಾಹಿತಿ ಮೂಲಕ ಬಹಿರಂಗವಾಗಿದೆ. ರಾಜ್ಯದ 111 ಕ್ಷೇತ್ರಗಳಲ್ಲಿ 3ಕ್ಕಿಂತ ಹೆಚ್ಚು ಮಂದಿ ಕ್ರಿಮಿನಲ್ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು