9:00 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ವೇತನ ಸಹಿತ ರಜೆಗೆ ಕಾರ್ಮಿಕ ಆಯುಕ್ತರ ಸೂಚನೆ

28/04/2023, 20:55

ಮಂಗಳೂರು(reporterkarnataka.com): ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ10ರ ಬುಧವಾರ ನಡೆಸಲಿರುವ ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ.
ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಕಲಂ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿಕೊಡಬೇಕು.
ಆದ ಕಾರಣ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮೇ10ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು