2:23 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಇಂದು ಚುನಾವಣೆ: ದ.ಕ. ಜಿಲ್ಲೆ; 17.81 ಲಕ್ಷ ಮತದಾರರು ಹಕ್ಕು ಚಲಾವಣೆಗೆ 1860 ಮತಗಟ್ಟೆ ರೆಡಿ

10/05/2023, 06:07

ಬೆಂಗಳೂರು(reporter Karnataka.com): ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಇಂದು ನಡೆಯಲಿದ್ದು, ದ.ಕ. ಜಿಲ್ಲೆಯ ಒಟ್ಟು 17,81,389 ಮತದಾರರು, 1,860 ಮತಗಟ್ಟೆಗಳಲ್ಲಿ ಮತಚಲಾಯಿಸಿ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.
ಶಾಂತಿಯುತ ಮತದಾನಕ್ಕೆ ರಾಜ್ಯದಲ್ಲಿ ಸಕಲ ಸಿದ್ದತೆಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ.
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ ಮೇ 10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 17,81,389 ಜನ ಮತದಾರರು ತಮ್ಮ ಮತದಾನ ಹಕ್ಕು ಚಲಾಯಿಸಲಿದ್ದು, 1,860 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಮತ್ತು ಚುನಾವಣಾ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮೇ 10ರ ಬುಧವಾರದಂದು ಮತದಾನ ಮತ್ತು ಮೇ 13ರ ಶನಿವಾರದಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈಗಾಗಲೇ ಮತದಾರರ ಅಂತಿಮ ಪಟ್ಟಿಯಲ್ಲಿರುವಂತೆ ಜಿಲ್ಲೆಯಲ್ಲಿ 8,70,991 ಪುರುಷ ಮತದಾರರು ಮತ್ತು 9,10,314 ಮಹಿಳಾ ಮತದಾರರು, 84 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 17,81,389 ಮತದಾರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮತಗಟ್ಟೆಗಳ ವಿವರ: ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,860 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳ್ತಂಗಡಿ 241, ಮೂಡಬಿದರೆ 221, ಮಂಗಳೂರು ಉತ್ತರ 244, ಮಂಗಳೂರು ದಕ್ಷಿಣ 224, ಮಂಗಳೂರು 210, ಬಂಟ್ವಾಳ 249, ಪುತ್ತೂರು 220 ಹಾಗೂ ಸುಳ್ಯದಲ್ಲಿ 231 ಸೇರಿದಂತೆ ಜಿಲ್ಲೆಯಲ್ಲಿ 32 ಮತಗಟ್ಟೆಗಳನ್ನು ಕ್ರಿಟಿಕಲ್ ಹಾಗೂ ವರ್ನರಬಲ್ ಎಂದು ಗುರುತಿಸಲಾಗಿದೆ. ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ ಹಾಗೂ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆಯನ್ನೂ ಮಾಡಲಾಗಿದೆ. ಮತಗಟ್ಟೆಯ ಸಿಬ್ಬಂದಿಗಳಿಗೆ ಈಗಾಗಲೆ ಎರಡು ಬಾರಿ ತರಬೇತಿ ನೀಡಲಾಗಿದೆ ಎಂದರು.
ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್: ಕ್ಲಿಷ್ಟ ಮತಗಟ್ಟೆಗಳನ್ನೊಳಗೊಂಡಂತೆ ಈ ಬಾರಿ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಒಟ್ಟು 939 ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 164 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು, ಉಳಿದ ಮತಗಟ್ಟೆಗಳಲ್ಲಿ ಸಿ.ಪಿ.ಎಂ.ಎಫ್‌ಗಳನ್ನು ನಿಯೋಜಿಸಲಾಗಿದೆ. ಮತದಾನದ ದಿನವಾದ ಮೇ 10ರ ಸಂಜೆ 6 ಗಂಟೆಯ ವರೆಗೆ ಸಮೀಕ್ಷೆ ನಡೆಸುವುದನ್ನು ನಿಷೇಧಿಸಲಾಗಿದೆ.
ಮತ ಚಲಾಯಿಸಲು ಏನೆಲ್ಲ ಬೇಕು?: ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಮತ ಚಲಾಯಿಸಲು ಈ ಕೆಳಕಂಡ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. ಮತದಾರ ಆಧಾರ ಕಾರ್ಡ್, ಎಂ.ಎನ್.ಆರ್.ಇ.ಜಿ.ಎ. ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ನೀಡಿರುವ ಭಾವಚಿತ್ರ ಇರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ಪ್ಯಾನ್ ಕಾರ್ಡ್, ಎನ್.ಪಿ.ಆರ್ ನ ಅಡಿಯಲ್ಲಿ ಆರ್.ಜಿ.ಐ. ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ (ಕೇಂದ್ರ, ರಾಜ್ಯ ಸರ್ಕಾರ, ಪಿಎಸ್‌ಯು ಗಳ ಗುರುತಿನ ಚೀಟಿ) ಎಂ.ಪಿ, ಎಂ.ಎಲ್.ಎ, ಎಂ.ಎಲ್.ಸಿ. ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ ದಾಖಲೆ.
ಮತದಾರರು ವೋಟರ್ ಸ್ಲಿಪ್ ಜೊತೆಗೆ ಎಪಿಕ್ ಕಾರ್ಡ್ ಅಥವಾ ಮೇಲೆ ತಿಳಿಸಿದ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಕಡ್ಡಾಯವಾಗಿ ಮತಗಟ್ಟೆಯಲ್ಲಿ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು