ಇತ್ತೀಚಿನ ಸುದ್ದಿ
ರಾಜ್ಯ ವಿಧಾನಸಭೆಗೆ ಯಾವುದೇ ಕ್ಷಣ ಚುನಾವಣೆ ಘೋಷಣೆ: ಸ್ಟೇಟ್ ಚೀಫ್ ಎಲೆಕ್ಷನ್ ಆಫೀಸರಿಂದ ಜಿಲ್ಲೆಗಳಿಗೆ ಸೂಚನೆ
24/03/2023, 17:52
ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಇನ್ನು ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಈ ಕುರಿತು ಎಲ್ಲ ಜಿಲ್ಲೆಗಳ ಚುನಾವಣಾಧಿಕಾರಿ/ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುತ್ತೋಲೆ ಕಳುಹಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಇದೇ ಏಪ್ರಿಲ್/ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ದೇಶದ ಮುಖ್ಯ ಚುನಾವಣಾ ಆಯುಕ್ತರು ಯಾವುದೇ ಕ್ಷಣದಲ್ಲಿ ಘೋಷಣೆ ಮಾಡಬಹುದು. ಈ ನಿಟ್ಟಿನಲ್ಲಿ ಚುನಾವಣೆ ಘೋಷಣೆಯಾಗುವ ಮುನ್ನ ಕೆಲವು ಪ್ರಮುಖ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.














