9:01 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ರಾಜ್ಯದ 3 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನವೆಂಬರ್ 13ರಂದು ಮತದಾನ; 23ರಂದು ಫಲಿತಾಂಶ

15/10/2024, 22:03

ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಇಂದು ಘೋಷಿಸಿದ್ದು,ನವೆಂಬರ್ 13ರಂದು ಮತದಾನ ನಡೆಯಲಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು,ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನ.23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಶಿಗ್ಗಾಂವಿ ಈ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಮೂವರು ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.
ದೇಶಾದ್ಯಂತ ಒಟ್ಟು 47 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನೂ ಆಯೋಗ ಪ್ರಕಟಿಸಿದೆ.
ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅಕ್ಟೋಬರ್ 30 ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು