ಇತ್ತೀಚಿನ ಸುದ್ದಿ
ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?
16/09/2021, 08:21
ಬೆಂಗಳೂರು(reporterkarnataka.com) : ರಾಜ್ಯಾದ್ಯಂತ ಗ್ರಾಮಕ್ಕೊಂದರಂತೆ ಸ್ಮಶಾನ ಇರಬೇಕು. ಎಲ್ಲೆಲ್ಲಿ ಸ್ಮಶಾನ ಇಲ್ಲವೋ ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಗ್ರಾಮಕ್ಕೊಂದು ಸ್ಮಶಾನ ಇರಬೇಕು.ಇದಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ 26 ಕೋಟಿ ಬಿಡುಗಡೆ ಮಾಡಿದೆ. ರಾಜ್ಯದ 372 ತಾಲ್ಲೂಕುಗಳಲ್ಲಿ ಸ್ಮಶಾನ ಇಲ್ಲ ಎಂಬ ವರದಿ ಇದೆ. ಸರ್ಕಾರ ಹಣ ನೀಡುತ್ತದೆ. ಆದರೆ ಕೃಷಿ ಭೂಮಿಯ ಬೆಲೆ ಹೆಚ್ಚಿರುವುದರಿಂದ, ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಜಾಗ ಖರೀದಿ ಮಾಡಲಾಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ರಸ್ತಾವನೆ ಪಡೆದು ಹೆಚ್ಚುವರಿ ಹಣ ನೀಡಿ, ಸ್ಮಶಾನಕ್ಕಾಗಿ ಭೂಮಿ ಖರೀದಿ ಮಾಡಲಾಗುವುದು ಎಂದರು.