ಇತ್ತೀಚಿನ ಸುದ್ದಿ
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಇಲಾಖೆ ಆದೇಶ
14/12/2022, 22:57

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ .ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.