9:59 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ರಾಜ್ಯದ 56 ಪ್ಯಾಸೆಂಜರ್ ಟ್ರೈನ್ ಸಂಚಾರ ರದ್ದು; ರೈಲ್ವೆ ಇಲಾಖೆ ನೀಡಿದ ಕಾರಣ ಏನು ಗೊತ್ತೇ?

04/09/2022, 20:38

ಬೆಂಗಳೂರು(reporterkarnataka.com):

ಬೆಂಗಳೂರು, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಮಾರ್ಗಗಳ ಸುಮಾರು 56 ಪ್ಯಾಸೆಂಜರ್‌ ರೈಲುಗಳು ಇಂದು ಮತ್ತು ನಾಳೆ ಓಡಾಟವನ್ನು‌ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಹಾಗು ದೊಡ್ಡ ಸಂಖ್ಯೆಯಲ್ಲಿ ರೈಲ್ವೆ ಸಿಬ್ಬಂದಿ ಇಲಾಖಾ ಪರೀಕ್ಷೆ ಹಾಜರಾಗುತ್ತಿರುವ ಕಾರಣ ವಿವಿಧ ಮಾರ್ಗಗಳ 56 ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು-ಮಾರಿಕುಪ್ಪಂ ಮಾರ್ಗದ 30 ರೈಲುಗಳು, ಬೆಂಗಳೂರು-ಮೈಸೂರು (10), ಬೆಂಗಳೂರು-ಧರ್ಮಾವರಂನ (6), ಬೆಂಗಳೂರು-ತುಮಕೂರು (4), ಬಂಗಾರಪೇಟೆ-ಮಾರಿಕುಪ್ಪಂನ (4), ಬೆಂಗಳೂರು -ಧರ್ಮಪುರಿ (4) ರೈಲುಗಳನ್ನು ರದ್ದು ಮಾಡಲಾಗಿದೆ.

ಅಷ್ಟೇ, ಅಲ್ಲ ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕೆಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಜೋಲಾರಪೇಟೆ, ಶಿವಮೊಗ್ಗ, ಹುಬ್ಬಳ್ಳಿ, ರಾಮನಗರ ಇನ್ನು ಹಲವೆಡೆ ರೈಲು ಸಂಚಾರ ರದ್ದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು