2:23 PM Wednesday27 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ರಾಜ್ಯದ 80 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ: ಅಪಾರ ಪ್ರಮಾಣದ ನಗ, ನಗದು ಪತ್ತೆ; 21 ಮಂದಿ ವಿರುದ್ಧ ಪ್ರಕರಣ

17/06/2022, 21:07

ಬೆಂಗಳೂರು(reporterkarnataka.com):  ರಾಜ್ಯದ ಹಲವೆಡೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಶೋಧ ನಡೆಸಲಾಗುತ್ತಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಲಾಗಿದೆ.

ಬೆಳಗಾವಿಯ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಭೀಮರಾವ್‌ ವೈ. ಪವಾರ್‌, ಸಣ್ಣ ನೀರಾವರಿ ಇಲಾಖೆಯ ಉಡುಪಿ ವಿಭಾಗದ ಸಹಾಯಕ ಎಂಜಿನಿಯರ್‌ ಹರೀಶ್‌, ಹಾಸನ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಕೃಷ್ಣ ಎಚ್.ವಿ., ಬಾಗಲಕೋಟೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಎನ್‌. ಪಡಸಾಲಿ, ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಪ್ಪ ನಾಗಪ್ಪ ಗೋಗಿ, ಗದಗ ಜಿಲ್ಲೆಯಲ್ಲಿನ ಪಂಚಾಯಿತಿ ಕಾರ್ಯದರ್ಶಿ ಪ್ರದೀಪ್‌ ಎಸ್.‌ ಆಲೂರು, ಬೆಂಗಳೂರಿನ ಉಪ ಮುಖ್ಯ ವಿದ್ಯುತ್‌ ನಿರೀಕ್ಷಕ ತಿಪ್ಪಣ್ಣ ಪಿ. ಸಿರಸಗಿ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ನಿಯಂತ್ರಕ ಮೃತ್ಯುಂಜ ಚನ್ನಬಸಯ್ಯ ತಿರಣಿ, ಕಾರವಾರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ರಾಜೀವ್‌ ಪುರಸಯ್ಯ ನಾಯಕ್‌, ಪೊನ್ನಂಪೇಟೆಯ ಜಿಲ್ಲಾ ಪಂಚಾಯತ್‌ ವಿಭಾಗದ ಕಿರಿಯ ಎಂಜಿನಿಯರ್‌ ಬಿ.ಆರ್‌. ಬೋಪಯ್ಯ, ಬೆಳಗಾವಿಯ ಜಿಲ್ಲಾ ನೋಂದಣಾಧಿಕಾರಿ ಮಧುಸೂದನ, ಸಣ್ಣ ನೀರಾವರಿ ಇಲಾಖೆಯ ಹೂವಿನಹಡಗಲಿ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಪರಮೇಶ್ವರಪ್ಪ, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಂಜುನಾಥ್‌ ಜಿ., ಬಿಡಿಎ ಸಿ ದರ್ಜೆ ನೌಕರ ಶಿವಲಿಂಗಯ್ಯ, ಕೊಪ್ಪಳದ ಪೊಲೀಸ್‌ ಇನ್‌ಸ್ಪೆಕ್ಟರ್‌ ಉದಯ ರವಿ, ಕಡೂರು ಪುರಸಭೆಯ ನಿರ್ವಾಹಕ ಬಿ.ಜಿ. ತಿಮ್ಮಯ್ಯ, ರಾಣೆಬೆನ್ನೂರಿನ ನಗರ ಯೋಜನಾ ಕಚೇರಿಯ ಚಂದ್ರಪ್ಪ ಸಿ. ಹೊಳೇಕರ್‌ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ನಿವೃತ್ತ ಕುಲಸಚಿವ ಜನಾರ್ದನ, ಜಲ ಸಂಪನ್ಮೂಲ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಮೋಹನಕುಮಾರ್‌, ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್‌ ಅವರ ಮನೆ ಹಾಗೂ ಆಸ್ತಿಗಳ ಮೇಲೆ ತನಿಖಾ ಸಂಸ್ಥೆ ದಾಳಿ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇಂದು, ಶುಕ್ರವಾರ ಬೆಳ್ಳಂಬೆಳಿಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು