8:05 PM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

02/12/2024, 23:59

ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಎಲ್ಲ ಜಾತಿ- ಧರ್ಮದವರ ಕೊಡುಗೆಯಿಂದ ಇದು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ನುಡಿದರು.
ನಮ್ಮ 5 ಗ್ಯಾರಂಟಿ ಗಳು ಹಾಗೂ ಅಭಿವೃದ್ಧಿ ಯೋಜನೆಗಳು ಎಲ್ಲ ಜಾತಿ, ಧರ್ಮದವರಿಗೆ ಸೇರಿದೆ. ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಯೋಜನೆಗಳನ್ನು ನಾವು ಕೊಡುತ್ತಲೇ ಬಂದಿದ್ದೇವೆ. ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆ ರೂಪಿಸುತ್ತೇವೆ ಎಂದು ಅವರು ನುಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಭೈರತಿ
ಸುರೇಶ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು