3:12 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು