7:46 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ

21/08/2021, 09:31

ಬೆಂಗಳೂರು(reporterkarnataka.com):
ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿದೆ. 

ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು, ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಳಗಾವಿ,  ಇಸ್ಲಾಮಿಯಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು, ಏಕಲವ್ಯ ಇನ್ ಸ್ಟಿಟ್ಟೂಟ್ ಆಫ್ ಟೆಕ್ನಾಲಜಿ, ಚಾಮರಾಜ ನಗರ, ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್, ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು ಇವು 2021- 22ನೇ ಸಾಲಿಗೆ ಮಾನ್ಯತೆ ಇಲ್ಲದ ಕಾಲೇಜುಗಳು.

ಮಾನ್ಯತೆ ಕಳೆದುಕೊಂಡ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು. ಯಾರಾದರೂ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಟಿಯು ಜವಾಬ್ದಾರವಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು