ಇತ್ತೀಚಿನ ಸುದ್ದಿ
ರಾಜ್ಯದ ಹಲವೆಡೆ ಭಾರಿ ಮಳೆ: ತುಂಬಿ ಹರಿಯುತ್ತಿದೆ ನೇತ್ರಾವತಿ, ಹೇಮಾವತಿ, ಕಾಳಿ; ಇನ್ನೂ 3 ದಿನ ವರ್ಷಧಾರೆ ನಿರೀಕ್ಷೆ
15/07/2021, 08:30

ಬೆಂಗಳೂರು(reporterkarnataka news): ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ 3 ದಿನಗಳ ಕಾಲ ರಾಜ್ಯದ ಹಲವೆಡೆ ಬಿರುಸಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ನೇತ್ರಾವತಿ, ಹೇಮಾವತಿ, ಕಾಳಿ, ಫಲ್ಗುಣಿ, ತುಂಗಾ, ಭದ್ರಾ ಮುಂತಾದ ನದಿಗಳು ಉಕ್ಕಿ ಹರಿಯುತ್ತಿವೆ. ಹಳ್ಳ ಕೊಳ್ಳಗಳು ತುಂಬಿವೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.