6:06 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ರಾಜ್ಯದ ಪ್ರತಿ ಜಿಲ್ಲೆಗೂ ಸರಕಾರ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸರಕಾರ ಚಿಂತನೆ: ಸಚಿವ ಡಾ. ಅಶ್ವಥ್ ನಾರಾಯಣ 

23/10/2021, 19:27

ಕುಂದಾಪುರ(reporterkarnataka.com): ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು.

ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಇದೆ. ಶೀಘ್ರದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಕರ್ನಾಟಕ ರಾಜ್ಯದಲ್ಲಿ ೮೫% ಮೊದಲ ಡೋಸ್ ಹಾಗೂ ೪೫% ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ನಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಮೊದಲ ಡೋಸ್ ನೀಡುವಿಕೆಯಲ್ಲಿ ಐದನೇ ಸ್ಥಾನದಲ್ಲಿದೆ. 

ದುಬೈ, ಮಧ್ಯಪ್ರಾಚ್ಯ ದೇಶದಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದರಿಂದ ಹೊರದೇಶಗಳಲ್ಲಿ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಬೇಡಿಕೆ ಇದೆ. 

ಜಗ್ಗತ್ತಿನಲ್ಲಿ ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ್ದು, ಇನ್ನು ಹೆಚ್ಚಿನ ಕ್ರಾಂತಿ ಮಾಡಲು ನಮ್ಮ ಸರಕಾರ ವಿನೂತನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ರೂಪಿಸುತ್ತಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಮುಖಂಡರಾದ ರಾಜೇಶ್ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು