2:39 AM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ

13/06/2021, 08:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಹೈಟೆಕ್ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವದ ಬಗ್ಗೆ ವೀಕ್ಷಿಸಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು, ಮಕ್ಕಳಿಗಾಗಿ ಕೋವಿಡ್ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

 ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ. ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಮೂರನೇ ಅಲೆ ಸಂಭವ ಇದ್ದು ಚಿಕ್ಕಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಮುಂಜಾಗ್ರತೆ ಸಲುವಾಗಿ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಆರಂಭ ಮಾಡುವುದಾಗಿ ನಿರ್ಧರಿಸಿದ್ದೇವೆ ಎಂದು ತಿಳಿಸಿದರು. 

ಈಗಾಗಲೇ ಚಿಕ್ಕಮಕ್ಕಳ ಕೋವಿಡ್ ಸೆಂಟರ್ ಗಳಿಗೆ 600 ಬೆಡ್ ಗಳನ್ನು ಈಗಾಗಲೇ ಕಲ್ಪಿಸಿದ್ದು, ಹಾಗೆ ಕೊರೊನಾದಿಂದ ತಂದೆ-ತಾಯಿ ಮರಣ ಹೊಂದಿ ಅನಾಥರಾದ 30 ಮಕ್ಕಳ ರಕ್ಷಣೆ ಮಾಡಿದ್ದೇವೆ. ಎಂದು ತಿಳಿಸಿದರು.

100 ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಕೇಂದ್ರಗಳನ್ನಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿಯಲ್ಲಿ ಬರುವ ಬಾಲಯ್ಯ ಕ್ಯಾಂಪಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಚಿಕ್ಕಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದರು.

ಗ್ರಾಮದ ಮೂರನೇ ಅಂಗನವಾಡಿ ಹೈಟೆಕ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಮಕ್ಕಳು ಆನ್ಲೈನ್  ಮೂಲಕ ಕಲಿಕೆ ಆಗುವುದು. ಕಲಿತ ಚಟುವಟಿಕೆಗಳನ್ನು ಟಿವಿ ಮುಖಾಂತರ ನಡೆಸಲಾಗುವುದು. ಜೊತೆಗೆ ಚಿಕ್ಕ ಮಕ್ಕಳಿಗೆ ಕಲಿಕೆಯ ಬಗ್ಗೆ ಗಮನ ಹರಿಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದ ಶಾಸಕರು, ಸಂಸದರು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು