2:03 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲೇ ಭಗವದ್ಗೀತೆ ‌ಬೋಧನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

19/09/2022, 20:42

ಬೆಂಗಳೂರು(reporterkarnataka.com):ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ
ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು.

ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು