8:25 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ರಾಜ್ಯದ ಯುವ ಜನತೆಗೆ ಉದ್ಯೋಗ ಖಾತರಿಪಡಿಸದ ಬಜೆಟ್: ಡಿವೈಎಫ್ಐ ಟೀಕೆ

07/07/2023, 23:48

ಮಂಗಳೂರು(reporterkarnataka.com): ವಿಧಾನಸಭಾ ಅಧಿವೇಶನದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್ ನ್ನು ಡಿವೈಎಫ್ಐ ರಾಜ್ಯ ಸಮಿತಿಯು ಖಂಡಿಸುತ್ತದೆ ಎಂದು ಅಧ್ಯಕ್ಷ ಮುನೀರ್ ಕಾಟಿಪಳ್ಳ ಹಾಗೂ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.
ರಾಜ್ಯದಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು ಅವುಗಳ ಭರ್ತಿ ಮಾಡಲು ಹಾಗೂ ಆದ್ಯತಾ ಕ್ಷೇತ್ರವಾರು ಉದ್ಯೋಗ ಸೃಷ್ಟಿ ಮಾಡುವ ದಿಸೆಯಲ್ಲಿ ಬಜೆಟ್ ಯಾವುದೇ ಚಕಾರ ಎತ್ತದಿರುವುದು ಯುವಜನರನ್ನು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಯುವನಿಧಿ ಯೋಜನೆ ಜಾರಿಗೆ ಸರಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆಯಾದರೂ, ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಈ ಯೋಜನೆಯನ್ನು ಅನ್ವಯಿಸಿರುವುದರಿಂದ, ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಇದರಿಂದ ಯಾವುದೇ ಆಸರೆ ಸಿಗುವುದಿಲ್ಲ. ಸರಕಾರ ಇದನ್ನು ಪರಿಷ್ಕರಿಸಬೇಕು.
ರಾಜ್ಯದಲ್ಲಿ ಶಾಲೆ, ಕಾಲೇಜು ಹಾಗೂ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಗುತ್ತಿಗೆ, ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ನೌಕರರು ಸೇವೆಸಲ್ಲಿಸುತ್ತಿದ್ದು ಅವರ ಖಾಯಮಾತಿಗೆ ಯಾವುದೇ ಕ್ರಮವನ್ನು ಕೈಗೊಳ್ಳದ ನಿರಾಶಾದಾಯಕ ಬಜೆಟ್ ಆಗಿದೆ.
ಕೌಶಲ್ಯಾಭಿವೃದ್ಧಿ ಇಲಾಖೆಯಡಿಯಲ್ಲಿ ಇದುವರೆಗೂ ಖಾಸಗಿ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ಎಲ್ಲಾ ಕೌಶಲ್ಯ ತರಬೇತಿಯನ್ನು ITI, GTTC, Polytechnic ಸಂಸ್ಥೆಗಳ ಮೂಲಕವೇ ನೀಡಿ, Industry ಮತ್ತು Academy ಯನ್ನು ಸಮನ್ವಯಗೊಳಿಸಿ ಕೌಶಲ್ಯ ತರಬೇತಿಯನ್ನು ನಡೆಸಲು ಮುಂದಾಗಿರುವುದು ಸ್ಚಾಗತಾರ್ಹವಾಗಿದೆಯಾದರೂ ತರಭೇತಿ ಪಡೆದವರಿಗೆ ಉದ್ಯೋಗ ಒದಗಿಸುವ ಬದ್ಧತೆ ತೋರುವಲ್ಲಿ ಬಜೆಟ್ ಸೋತಿದೆ.
ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ರದ್ದಗೊಳಿಸಿರುವುದು ಮತ್ತು ಕೇಂದ್ರ ಸರಕಾರ ರದ್ದುಪಡಿಸಿದ್ದ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆದ ಕ್ರಮಗಳು ಸ್ವಾಗತಾರ್ಹವಾಗಿದೆ.
ಸರಕಾರ ತಾನು ಘೋಷಿಸಿದ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮತ್ತು ರಾಜಸ್ವ ಸಂಗ್ರಹದಲ್ಲಿ ಹೆಚ್ಚಳ ಸಾಧಿಸುವ ತರಾತುರಿಯಲ್ಲಿ ಸ್ಟ್ಯಾಂಪಿಗ್, ದ್ವಿಚಕ್ರ ಮತ್ತು ಇತರ ವಾಣಿಜ್ಯ ವಾಹನಗಳ ಹಾಗೂ ಅಬಕಾರಿ ಮೇಲಿನ ತೆರಿಗೆ ಏರಿಕೆ ಮಾಡಿರುವುದು ಒಂದು ಕೈಯಲ್ಲಿ ನೀಡಿ ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಕ್ರಮವಾಗಿದೆ.
ಉದ್ಯೋಗಕ್ಕಾಗಿ ಹಾತೊರೆಯುತ್ತಿರುವ ರಾಜ್ಯದ ಯುವಜನರಿಗೆ ತೀವ್ರ ಹತಾಸೆಯನ್ನುಂಟು ಮಾಡಿದ ಈ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ವಿರೋಧಿಸುತ್ತದೆ. ಹಾಗೂ ರಾಜ್ಯ ಸರಕಾರ ಕೂಡಲೇ ಖಾಲಿಯಿರುವ ಹುದ್ದೆಗಳನ್ನು ಭರ್ತಿಗೊಳಿಸಲು ಹಾಗೂ ಕೃಷಿ ಕ್ಷೇತ್ರ ಸೇರಿದಂತೆ ಇತರೆ ಆದ್ಯತಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು