ಇತ್ತೀಚಿನ ಸುದ್ದಿ
ರಾಜ್ಯಾದ್ಯಂತ ಹಲವೆಡೆ ಲೋಕಾಯುಕ್ತ ದಾಳಿ: ಕೆ. ಆರ್.ಪುರ ತಹಶೀಲ್ದಾರ್ ಮನೆಯಲ್ಲಿ ನೋಟಿನ ಕಂತೆ ಪತ್ತೆ
28/06/2023, 12:52

ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದ್ದು, ಕೆ. ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರ ಮನೆಗೆ ದಾಳಿ ನಡೆಸಲಾಗಿದೆ.
ಆದಾಯಕ್ಕೆ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಜಿತ್ ರೈ ಅವರ ಕೊಡಿಗೇಹಳ್ಳಿ ನಿವಾಸದ ಮೇಲೆ ದಾಳಿ ನಡೆದಿದೆ. ತಹಶೀಲ್ದಾರ್ ಮನೆಯಿಂದ ನೋಟಿನ ಕಂತೆಗಳು ಪತ್ತೆಯಾಗಿವೆ. ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದೆ.