ಇತ್ತೀಚಿನ ಸುದ್ದಿ
ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ: ಮಂಗಳೂರಿನಲ್ಲಿ ಸಾಧಾರಣ ವರ್ಷಧಾರೆಗೂ ರಸ್ತೆಯಲ್ಲಿ ನೀರು!
05/06/2021, 07:16
ಬೆಂಗಳೂರು(reporterkarnataka news): ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯಯಿದ್ದು, ದಕ್ಷಿಣ ಕನ್ನಡದ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ.
ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡು, ಕೇರಳ, ಕರ್ನಾಟಕ, ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್ ಘಡ್, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ತಿಳಿಸಿದೆ.
ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಹೆಚ್ಚಿದೆಯೆಂದು ತಿಳಿಸಿದೆ.