9:52 AM Sunday12 - January 2025
ಬ್ರೇಕಿಂಗ್ ನ್ಯೂಸ್
ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

28/04/2024, 14:06

ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಭಾನುವಾರ
ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು
ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಸರಕಾರ ಇರುವ ಕಡೆಗಳೆಲ್ಲ ಕಾನೂನು ಸಮಸ್ಯೆ ಎದುರಾಗಿದೆ. ಕರ್ನಾಟಕದ ಪರಿಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ ಎಂದು ಪ್ರಧಾನಿ ಕಿಡಿ ಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ನಿಂತು ಹೋಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದರು.
ದೇಶದಲ್ಲಿ ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ಭಾರತ ಇನ್ನಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಾ.ಪ್ರಭಾಕರ ಕೋರೆ, ಅಣ್ಣಾಸಾಹೇಬ ಜೊಲ್ಲೆ, ಜಗದೀಶ ಶೆಟ್ಟರ್, ಬಾಲಚಂದ್ರ ಜಾರಕಿಹೊಳಿ, ಈರಪ್ಪ ಕಡಾಡಿ, ಅಭಯ ಪಾಟೀಲ, ರಮೇಶ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು