9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು