2:14 PM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್

05/09/2023, 20:45

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಅವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಆದರೆ, ಕಾಂಗ್ರೆಸ್ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.


ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದವರು, ಮುಂದಿನ ಲೋಕಸಭಾ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ., ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್ ಎಸ್. ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು