2:06 AM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

10/11/2024, 14:59

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.
ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ‌ಮಾತನಾಡಿದರು.
ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು.
ರಾಜ್ಯದಲ್ಲಿ ಅಸಮರ್ಥ ಸಿಎಂಯೊಬ್ಬರು ಆಡಳಿತ‌ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಕ್ತ ಮಾಡುತ್ತವೆ ಎಂದು ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ, ಸಾಲು ಸಾಲು ಹಗರಣಗಳಿಂದ ಒಂದೂವರೆ ವರ್ಷದಲ್ಲಿಯೇ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಹದಿನೈದು ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅಪರಾಧಿ ಸ್ಥಾನದಲ್ಲಿ‌ ನಿಂತಿದ್ದಾರೆ. ಮುಡಾ ಕಮಿಷನರ್ ದಿನೇಶ್ ಎಂಬ ಅಧಿಕಾರಿಯನ್ನು ಸ್ವತಃ ಸಿಎಂ ಬಚ್ಚಿಟ್ಟಿದ್ದಾರೆ ಎಂದರು.
ಕೋವಿಡ್ ಅಕ್ರಮದ ಬಗ್ಗೆ ನ್ಯಾ. ಮೈಕಲ್ ಕುನ್ಹಾ ಮಧ್ಯಂತರ 14 ಪುಟದ ವರದಿಯಲ್ಲಿ ಹದಿನಾಲ್ಕು ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಈ ವರದಿಯಿಂದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಶ್ರೀರಾಮುಲು ಅವರನ್ನು ಬೆದರಿಸಲು ಹೊರಟಿದ್ದಾರೆ. ಆದರೆ, ಯಡಿಯೂರಪ್ಪ ಅವರ ತಾಕತ್ತು ಕಾಂಗ್ರೆಸ್ ‌ನಾಯಕರಿಗಿಂತ ಸಿದ್ದರಾಮಯ್ಯ ಅವರಿಗೆ ಹೆಚ್ಚು ಗೊತ್ತು ಎಂದರು. ನಾನಿನ್ನು ಅಂಬೆಗಾಲು ಇಡುತ್ತಿರುವದಕ್ಕೆ ಸಿದ್ದರಾಮಯ್ಯ ಭಯ ಬೀತರಾಗಿದ್ದಾರೆ. ಆದರೆ, ಇನ್ನೂ ಆನೆಗಾಲು ಇಟ್ಟರೆ ಸಿದ್ದರಾಮಯ್ಯ ಪರಿಸ್ಥಿತಿ ಏನು ಎಂದು ವ್ಯಂಗ್ಯವಾಡಿದರು. ಗ್ಯಾರಂಟಿ ಯೋಜನೆಗಳು ಕೇವಲ ತಾತ್ಕಾಲಿಕ ಕೆಲವೇ ದಿನಗಳಲ್ಲಿ ಸ್ಥಗಿತವಾಗಲಿವೆ ಎಂದರು.
ಶಾಸಕರಾದ‌ ಜಿ. ಜನಾರ್ದನ ರೆಡ್ಡಿ, ಹರೀಶ್‌ ಪೂಂಜಾ, ಕೃಷ್ಣಾ ನಾಯ್ಕ್, ದೀರಜ್ ಗುಂಡೂರಾವ್, ಮಾಜಿ ಶಾಸಕರಾದ‌ ರೇಣುಕಾಚಾರ್ಯ, ಅರಗ ಜ್ಞಾನೇಂದ್ರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು