3:53 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಎಡವಿದ್ದೆಲ್ಲಿ?: ಸಿಎಂ ತನ್ನ ತವರು ಜಿಲ್ಲೆಯಲ್ಲೇ ಗೆಲುವು ತಂದು ಕೊಡಲಿಲ್ಲ!, ಕೆಪಿಸಿಸಿ ಅಧ್ಯಕ್ಷರಿಗೆ ತಮ್ಮನನ್ನೇ ಗೆಲ್ಲಿಸಲಾಗಿಲ್ಲ!!

04/06/2024, 22:42

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಡಬ್ಬಲ್ ಡಿಜಿಟ್ ಗೆ ರೀಚ್ ಆಗಲು ಕೊನೆಗೂ ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು 20, 18, 15 ಅಂತ ಏನೆಲ್ಲ ಸಂಖ್ಯೆ ಕೊಟ್ಟರೂ ಕಾಂಗ್ರೆಸ್ ಗೆ 9ಕ್ಕಿಂತ ಹೆಚ್ಚು ಬಾಚಿಕೊಳ್ಳಲು ಸಾಧ್ಯವಾಗಲಿಲ್ಲ.
ಒಂದು ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ
136 ಸ್ಥಾನಗಳನ್ನು ಪಡೆಯುವ ಮೂಲಕ ನಿಚ್ಚಳ ಬಹುಮತ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ 10 ಸ್ಥಾನ ಪಡೆಯಲೂ ಸಾಧ್ಯವಾಗಲಿಲ್ಲ. ರಾಜ್ಯದ ಜನತೆಗೆ ಆರ್ಥಿಕವಾಗಿ ನೆರವಾಗಬಲ್ಲ ಹಲವು ಯೋಜನೆಗಳನ್ನು ನೀಡಿಯೂ ಅದರ ಫಲ ಉಣ್ಣಲು ಕಾಂಗ್ರೆಸ್ಸಿಗೆ ಸಾಧ್ಯವಾಗಲಿಲ್ಲ. ಬದಲಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ತವರು ಜಿಲ್ಲೆಯಲ್ಲೇ ಪಕ್ಷ ವನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಅಪರೂಪದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಯದುವೀರ್ ಒಡೆಯರ್ ಗೆಲುವು ಕಂಡಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಮ್ಮ ಮನೆಯವರನ್ನೇ ಗೆಲ್ಲಿಸಲು ಸಾಧ್ಯವಾಗಲಿಲ್ಲ. ಶಿವಕುಮಾರ್ ಅವರ ತಮ್ಮ ಡಿ.ಕೆ. ಸುರೇಶ್ ಅವರು ಹೃದಯ ತಜ್ಞ ಡಾ. ಮಂಜುನಾಥ್ ಅವರ ಎದುರು ಸೋಲು ಅನುಭವಿಸಿದ್ದಾರೆ. ಬೆಳಗಾವಿಯಲ್ಲಿ ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಎದುರು ಅಲ್ಪ ಮತಗಳ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಗೆ ಈ ಬಾರಿಯೂ ಗೆಲುವು ದೊರಕಲಿಲ್ಲ. ಅದರ ಬದಲಿಗೆ ಸೋಲಿನ ಅಂತರವನ್ನು ಬಹಳಷ್ಟು ಹೆಚ್ಚಿಸಿಕೊಂಡು ಹೀನಾಯ ಪರಾಭವ ಅನುಭವಿಸಬೇಕಾಯಿತು. ಇಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ವಿಫಲವಾಗಿರುವುದು ಕೂಡ ಸೋಲಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು