ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ ಇಲಾಖೆ ಹೈ ಅಲರ್ಟ್
07/01/2025, 12:09
ಬೆಂಗಳೂರು(reporterkarnataka.com):ಎಚ್ ಎಂಪಿವಿ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ ಸಭೆ ನಡೆಯಲಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವೇಳೆ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್ ಎಂಪಿವಿ ವೈರಸ್ ಇರುವುದು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚೀನಾದಲ್ಲಿ ಎಚ್ ಎಂಪಿವಿ(HMPV) ಪ್ರಕರಣಗಳು ವರದಿಯಾಗುತ್ತಿವೆ. ಇದು ಕೋವಿಡ್-19 ನಂತಹ ಗಂಭೀರ ಪರಿಸ್ಥಿತಿಗೆ ಕಾರಣವಾಗುತ್ತಿಲ್ಲ ಎಂದು ತಜ್ಞರು ಹೇಳಿದ್ದಾರೆ. ನಾಗರಿಕರು ಯಾವುದೇ ತರಹ ಭಯಪಡುವ ಅವಶ್ಯಕತೆ ಇಲ್ಲ.