ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ
03/02/2025, 19:35
ಹಾಸನ(reporterkarnataka.com): ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದರು.
ಸಾಫ್ಟ್‌ವೇರ್ ಉದ್ಯಮಕ್ಕೆ ಕರ್ನಾಟಕ ಹಬ್ ಆಗಿದೆ. ಹೀಗಾಗಿ ಆರ್ಟಿಫಿಷಲ್ ಇಂಟಲಿಜೆನ್ಸ್ ಕ್ಷೇತ್ರಕ್ಕೆ ಕರ್ನಾಟಕದಲ್ಲೂ ಉತ್ತೇಜನ ಕೊಡಬೇಕೆಂದು ಪ್ರಯತ್ನ ಮಾಡುತ್ತಿದ್ದೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ. ಈ ಬಗ್ಗೆ ನಾನು ಕೇಂದ್ರದಲ್ಲಿ ಸಂಬಂಧಪಟ್ಟ ಎಲ್ಲಾ ಸಚಿವರ ಜತೆಯೂ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದರು.