12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಧಾರ

25/04/2022, 22:48

ಬೆಂಗಳೂರು(reporterkarnataka.com);ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿದರು. 

ರಾಜ್ಯಾದ್ಯಂತ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಸದ್ಯ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಈ ಸಂಬಂಧ ಮಾರ್ಗಸೂಚಿ ಹೊರಡಿಸುತ್ತೇವೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದುವರೆಗೆ ಲಸಿಕೆ ಪಡೆಯದೇ ಇರುವವರಿಗೆ ಹೆಚ್ಚು ಸಮಸ್ಯೆ ಆಗುತ್ತಿದೆ. ಆದ್ದರಿಂದ 4ನೇ ಅಲೆಯವರೆಗೆ ಕಾಯಬೇಡಿ. ಪ್ರತಿಯೊಬ್ಬರು ಲಸಿಕೆ ಪಡೆಯಬೇಕು. ಎರಡೂ ಡೋಸ್ ಪಡೆದವರು ಬೂಸ್ಟರ್ ಡೋಸ್ ಪಡೆಯಲು ಮುಂದಾಗಬೇಕುಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು