1:45 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ?

20/12/2021, 15:16

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾನುವಾರ ಲಿಂಗಾಯತ ಪಂಚಮಸಾಲಿ ಸಮುದಾಯ ಭವನದ ಕಾಮಗಾರಿಗೆ ಅಡಿಗಲ್ಲು ಮತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತೀವ್ರ ಭಾವಜೀವಿಯಾದ ಸಿಎಂ ಅವರುಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ.ಈ ಜೀವನ ಶಾಶ್ವತವಲ್ಲ, ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ನಮಗೆ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರದ ಎಲ್ಲಾ ಹುದ್ದೆಗಳೂ ಶಾಶ್ವತವಲ್ಲ. ಈ ಬಗ್ಗೆ ನಾವು ನಿರಂತರವಾಗಿ ಜಾಗೃತರಾಗಿರಬೇಕು ಎಂದು ಹೇಳಿದರು.

ಕ್ಷೇತ್ರದ ಹೊರಗಡೆ ಮಾತ್ರ ನಾನು ಸಿಎಂ, ಇಲ್ಲಿ ಬಂದಾಗ ಕೇವಲ ಬಸವರಾಜ ಬೊಮ್ಮಾಯಿ. 

ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದಲೇ ನಾನು ರಾಜ್ಯದ ಸಿಎಂ ಆಗಿದ್ದೇನೆ. ನಾನು ಯಾವಾಗಲೂ ಹೇಳುವ ಒಂದು ವಿಷಯವೆಂದರೆ, ನಾನು ಈ ಕ್ಷೇತ್ರದಿಂದ ಹೊರಗಿರುವಾಗ ನಾನು ಗೃಹ ಸಚಿವ, ಜಲಸಂಪನ್ಮೂಲ ಸಚಿವನಾಗಿರಬಹುದು. ಆದರೆ, ನಾನು ಇಲ್ಲಿಗೆ ಹಿಂತಿರುಗಿದಾಗಲೆಲ್ಲಾ ನಾನು ಬಸವರಾಜ ಬೊಮ್ಮಾಯಿ ಮಾತ್ರ ಎಂದರು.

“ನಿಮ್ಮ ಮನೆಗೆ ಬಂದಾಗ ನೀವು ನನಗೆ ರೊಟ್ಟಿ ತಿನ್ನಿಸಿದ್ದೀರಿ, ಅದನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದೇ ಕೆಲಸ ಮಾಡಿದರೂ ನಿಮಗೆ ಸದಾ ಋಣಿಯಾಗಿರುತ್ತೇನೆ. ನನಗೆ ಯಾವುದೇ ದೊಡ್ಡ ಆಸೆಗಳಿಲ್ಲ. ಆದರೆ ನನ್ನ ಕ್ಷೇತ್ರದ ಜನರ ಪ್ರೀತಿಗೆ ಸದಾ ಪಾತ್ರನಾಗಬೇಕು ಎಂದು ಬಯಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಜನತಾದಳ ಸರಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂತು. ನಂತರ ಹೈಕಮಾಂಡ್ ಸೂಚನೆ ಮೇರೆಗೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಸವರಾಜ ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇನ್ನು ಸುಮಾರು 16 ತಿಂಗಳಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿದು ಚುನಾವಣೆ ನಡೆಯಲಿದೆ. ಅಷ್ಟರಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯಾಗಲಿದೆ ಎನ್ನಲಾಗಿದೆ. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರೂ ಬದಲಾಗಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು