ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗೋದು ಫಿಕ್ಸ್, ಸಂಸತ್ ಚುನಾವಣೆ ಬಳಿಕ ಹೊಸ ಸಿಎಂ: ಬಿಜೆಪಿ ನಾಯಕ ಯತ್ನಾಳ್ ಭವಿಷ್ಯ
06/11/2023, 19:52
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಚಾಮರಾಜನಗರ
info.reporterkarnataka@gmail.com
ಸಙಸತ್ ಚುನಾವಣೆ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗೋದು ಫಿಕ್ಸ್ ಎಂದು ಬಿಜೆಪಿ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಚಾಮರಾಜನಗರ ಸೀಗೆಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ. ಬೆಳಗ್ಗೆ ಎದ್ದರೆ ಪ್ರಧಾನಿ ಬೈಯ್ಯೋದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲಸವಾಗಿದೆ ಎಂದು ಕಿಡಿಕಾರಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿಗೆ ಒಂದು ವಾರ ಕಾಯುತ್ತಾರೆ. ಅಂತಹದಲ್ಲಿ ಪ್ರಧಾನಿ ಮೋದಿ ಭೇಟಿಗೆ ಒಂದು ದಿನ ಕಾದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.