8:34 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

28/03/2022, 10:27

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಗುತ್ತಿಗೆ ಹೊರಗುತ್ತಿಗೆ ನೌಕರರ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾಧ್ಯಂತ ಲಭ್ಯವಾಗೋದಿಲ್ಲ. ಅಲ್ಲದೇ ಏಪ್ರಿಲ್ 2ರಂದು ಯುಗಾದಿ ರಜೆ ಇರಲಿದೆ.

ಏಪ್ರಿಲ್ 3ರಂದು ಶನಿವಾರ ಒಂದು ದಿನ ಆರೋಗ್ಯ ಸೇವೆ ಲಭ್ಯವಾಗಲಿದೆ, ಏಪ್ರಿಲ್ 4ರಂದು ಭಾನುವಾರವಾದ ಕಾರಣ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಆರೋಗ್ಯ ಸೇವೆಯಲ್ಲಿ 3 ದಿನ ವ್ಯತ್ಯಯ ಉಂಟಾಗಲಿದೆ.

ರಾಜ್ಯದಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸೋ ನಿಟ್ಟಿನಲ್ಲಿ ಶ್ರೀನಿವಾಸಾಚಾರಿಯವರ ಸಮಿತಿಯು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದು ಬಂದಿದ್ದರು, ವರದಿಯಲ್ಲಿನ ಶಿಫಾರಸ್ಸುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆಗೂ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕರೆ ನೀಡಿದ್ದರು.ಆದ್ರೇ.. ವಿಧಾನ ಪರಿಷತ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಸಂಬಂಧ ಮಾತನಾಡಿ ಶ್ರೀನಿವಾಸಾಚಾರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳೋದಾಗಿಯೂ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು