ಇತ್ತೀಚಿನ ಸುದ್ದಿ
ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ 3-4 ದಿನಗಳಲ್ಲಿ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರೀ ಮಳೆ ನಿರೀಕ್ಷೆ
02/06/2022, 15:12
ಬೆಂಗಳೂರು(reporterkarnataka.com):.ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರುವ ಸಾಧ್ಯತೆಯಿದೆ.
ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.