ಇತ್ತೀಚಿನ ಸುದ್ದಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ; ದೇಗುಲದ ಅತಿಥಿ ಗೃಹದಲ್ಲಿ ವಾಸ್ತವ್ಯ
29/06/2022, 20:30
ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜೂ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ.
ಜೂ.30ರ ಗುರುವಾರ ಮಧ್ಯಾಹ್ನ 12.45ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಅಲ್ಲಿನ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವರು. ಮಧ್ಯಾಹ್ನ 3 ಗಂಟೆಗೆ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ರಾತ್ರಿ ದೇವಸ್ಥಾನದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಜುಲೈ 1ರ ಬೆಳಿಗ್ಗೆ 6 ಗಂಟೆಗೆ ಕುಕ್ಕೆ ಸುಬ್ರಮಣ್ಯದಲ್ಲಿ ದೇವರ ದರ್ಶನ ಪಡೆದು, 7 ಗಂಟೆಗೆ ಅತಿಥಿ ಗೃಹಕ್ಕೆ ಆಗಮಿಸುವರು. 9.30ಕ್ಕೆ ಮಡಿಕೇರಿಗೆ ತೆರಳುವರು ಎಂದು ರಾಜ್ಯಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.