9:11 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

18/08/2024, 19:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಂಜನಗೂಡು, ವರುಣ ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಿಳೆಯರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ್ದರು.
ಮೈಸೂರು ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಭಾವಚಿತ್ರವನ್ನು ಸುಡುವ ಮೂಲಕ ರಸ್ತೆ ತಡೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ
ಇದು ಬಿಜೆಪಿಯವರ ಪಿತೂರಿ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧವು ಇಂತಹದೇ ದೂರು ನೀಡಿದಾಗ ಏಕೆ ಕ್ರಮ ವಹಿಸಲ್ಲಿಲ್ಲ ರಾಜ್ಯಪಾಲರೇ ?ಎಂದು ಅವರ ವಿರುದ್ಧ ಗುಡುಗಿದರು.
ಖಾಸಗಿ ವ್ಯಕ್ತಿಗಳು ನೀಡಿದ ದೂರಿನ ಮೇಲೆ ಇಂತಹ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಇದರ ಹಾಗೂ ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಘಟನೆಯ ಬಗ್ಗೆ ವಿವರಿಸಿದರು.


ಮೈಸೂರು- ಊಟಿ ಹೆದ್ದಾರಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್,, ಮುಖಂಡರುಗಳಾದ ಇಂಧನ ಬಾಬು, ಕರುಳಪುರ ನಾಗರಾಜು, ನಾಗೇಶ್ ರಾಜ್, ಶಿವಣ್ಣ, ಮಂಜುನಾಥ್, ಶ್ರೀಧರ್, ಮಾರುತಿ, ಅಜ್ಗರ್, ಅಕ್ಬರ್ ಅಲಿ, ಮಾದಪ್ಪ, ಶಶಿರೇಖಾ ಕುರಿಹುಂಡಿ ರಾಜು, ಬಾಲರಾಜು, ನೀಲಿ ಸಿದ್ದು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು