ಇತ್ತೀಚಿನ ಸುದ್ದಿ
ರಾಜಸ್ಥಾನ ಕನ್ಹಯ್ಯ ಲಾಲ್ ಹತ್ಯೆ: ಬಣಕಲ್, ಕೊಟ್ಟಿಗೆಹಾರದಲ್ಲಿ ಬಂದ್ ನಡೆಸಿ ಪ್ರತಿಭಟನೆ
04/07/2022, 21:24
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬಣಕಲ್, ಕೊಟ್ಟಗೆಹಾರ, ಚಕಮಕ್ಕಿ, ಫಲ್ಗುಣಿ ಹಾಗೂ ಸಬ್ಬೇನಹಳ್ಳಿಯಲ್ಲಿ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು.
ವಿಶ್ವ ಹಿಂದೂ ಪರಿಷತ್, ಭಜರಂಗದಳ, ರಾಜ್ಯ ಟೈಲರ್ ಅಸೋಸಿಯೇಷನ್ ಬಣಕಲ್, ವರ್ತಕರ ಸಂಘ, ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಹಾಗೂ ಹಂತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಒತ್ತಾಯಿಸಿದರು. ನೂರಾರು ಸಂಖ್ಯೆಯಲ್ಲಿ ಹಿಂದು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.