ಇತ್ತೀಚಿನ ಸುದ್ದಿ
ರಾಜ್ಯದಲ್ಲಿ 2 ಲಕ್ಷ ಕೋಟಿ ಹೂಡಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
19/11/2022, 12:01

ಮಂಗಳೂರು(reporterkarnataka.com):- ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದರು.
ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಅಶ್ವಥ ನಾರಾಯಣ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ,ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿದ್ದರು.