6:26 AM Friday25 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ರಾಕೇಶ್ ನಾಯ್ಕ ಕೆ. ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್

18/03/2026, 21:47

ಪುತ್ತೂರು(reporterkarnataka.com): ​ಮಂಗಳೂರು ವಿಶ್ವವಿದ್ಯಾಲಯ ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ನಿವಾಸಿ ರಾಕೇಶ್ ನಾಯ್ಕ ಕೆ. ಅವರಿಗೆ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.
ಅವರು “ಸೋಶಿಯೋ-ಇಕೊನೋಮಿಕ್ ಎಂಪವರ್‌ಮೆಂಟ್ ಆಫ್ ಶೆಡ್ಯೂಲ್ಡ್ ಟ್ರೈಬ್ಸ್: ಎ ಕಂಪಾರೇಟಿವ್ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” (Socio-Economic Empowerment of Scheduled Tribes: A Comparative Study in Dakshina Kannada District) ಎಂಬ ಶೀರ್ಷಿಕೆಯ ಮೇಲೆ ಸಂಶೋಧನೆಯನ್ನು ನಡೆಸಿ ಮಹಾ ಪ್ರಬಂಧವನ್ನು ಮಂಡಿಸಿದ್ದಾರೆ. ಇವರು ತಮ್ಮ ಸಂಶೋಧನೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಜೀದಾ ಬಾನು ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ. ಇವರು ಭಾರತ ಸರ್ಕಾರದ ಮಿನಿಸ್ಟ್ರಿ ಆಫ್ ಟ್ರೈಬಲ್ ಅಫೇರ್ಸ್ ವತಿಯಿಂದ ನೀಡಲಾಗುವ ನ್ಯಾಷನಲ್ ಫೆಲೋಶಿಪ್ ಫೋರ್ ಟ್ರೈಬಲ್ ಸ್ಟೂಡೆಂಟ್ಸ್ ಎಂಬ ಶಿಷ್ಯವೇತನದ ಮೂಲಕ ಸಂಶೋಧನೆಯನ್ನು ಪೂರ್ಣಗೊಳಿಸಿರುತ್ತಾರೆ. ಇವರು ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ನಿವಾಸಿಗಳಾದ ಶ್ರೀ ಈಶ್ವರ ನಾಯ್ಕ ಕರ್ಕುಂಜ ಮತ್ತು ಅನಸೂಯರವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು