6:37 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ರಾಕೇಶ್ ಟಿಕಾಯತ್ ಮೇಲೆ ಹಲ್ಲೆ; ಆರೋಪಿಗಳು  ಯಾವ ಪಕ್ಷದವರಾದರೂ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

31/05/2022, 08:09

ಬೆಂಗಳೂರು(reporterkarnataka.com): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 

ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಟಿಕಾಯತ್ ಮೇಲೆ ಪತ್ರಕರ್ತರ ಸೊಗಿನಲ್ಲಿ ಮಸಿ ಹಾಕಿದ್ದಾರೆ. ಅವರು ಯಾವ ಪಕ್ಷದವರೆ ಆದರೂ ಬಂಧನ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಮೂವರ ಬಂಧನ ಆಗಿದೆ. ಇಂತಹ ಘಟನೆ ರಾಜ್ಯದಲ್ಲಿ ಆಗಬಾರದಿತ್ತು. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾವ ಪಕ್ಷದವರು ಕೂಡ ಇಂತಹ ಕೃತ್ಯ ಮಾಡಲು ಹೇಳುವುದಿಲ್ಲ ಎಂದರು.

ಘಟನೆ ಖಂಡಿಸಿ ಕಾಂಗ್ರೆಸ್ ನಾಯಕರು ಸೇರಿ, ರೈತಪರ ಮುಖಂಡರು ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು