4:55 AM Wednesday16 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ: ಶಾಸಕ ಡಾ.ಭರತ್ ಶೆಟ್ಟಿ

18/03/2024, 20:25

ಅಡ್ಯಾರ್(reporterkarnataka.com): ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ, ಗೌರವಕ್ಕೆ ಪಾತ್ರವಾಗುತ್ತದೆ .ಸಮಾಜ ಸೇವೆಯ ಮೂಲಕ ಮನೆ ಮಾತಾದ ಸಂಘಟನೆಯು ಇದೀಗ ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಗಳಾದ ಪ್ರಮೋದ್ , ಕೋಡ್ದಬ್ಬು ಪಂಜುರ್ಲಿ ದೈವಸ್ಥಾನದ ಮೋಹನ್ ಸಾಲ್ಯಾನ್ , ಕೋಟಿ ಗುರಿಕಾರ, ಜೈ ಆಂಜನೇಯ ರೈಸ್ಲಿಂಗ್ ಸೆಂಟರ್ ನ ಯೋಗ ಶಿಕ್ಷಕರಾದ ಸುಧೀರ್, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯೋಜಕ್ ಉಲ್ಲಾಸ್ , ವೆನ್ಲಾಕ್ ಆಸ್ಪತ್ರೆಯ ಆಂಟನಿ , ವೈದ್ಯರಾದ ಸೆಲ್ವಿ, ಸಂಸ್ಥೆಯ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು