4:37 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ | ಕೇವಲ 15 ಸಾವಿರ ಸಂಬಳದ ವ್ಯಕ್ತಿಗೆ ಫಾರ್ಮ್​ಹೌಸ್​, 65 ಲಕ್ಷ ರೂ. ಮನೆ!!

29/06/2026, 15:04

ನವದೆಹಲಿ(reporterkarnataka.com): ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣದಲ್ಲಿ ಈಗಾಗಲೇ 8 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ಈ ದರೋಡೆ ಬಟಾಬಯಲಾಗುತ್ತಿದ್ದಂತೆ ಟ್ರಸ್ಟ್​ನ​ ಪ್ರಧಾನ ಕಾರ್ಯದರ್ಶಿ ಚಂಪತ್ ಮತ್ತು ಟ್ರಸ್ಟಿ ಅನಿಲ್ ತಮ್ಮ ಸ್ಥಾನಗಳಿಗೆ​ ದಿಢೀರ್​​ ರಾಜೀನಾಮೆ ಘೋಷಿಸಿದರು. ಈ ಬೆಳವಣಿಗೆಗಳು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡಿದ್ದು, ಆರೋಪಿಯೊಬ್ಬನ ಸಂಬಳಕ್ಕೂ ಆತನ ಬಳಿಯಿರುವ ಆಸ್ತಿ ಮೌಲ್ಯವು ಸದ್ಯ ತನಿಖಾ ತಂಡವನ್ನೇ ನಿಬ್ಬೆರಗಾಗಿಸಿದೆ.
ರಾಮನ ಹುಂಡಿಯನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿ ಅನುಕಲ್ಪ್ ಮಿಶ್ರಾಗೆ ಅಯೋಧ್ಯೆಯಲ್ಲಿ 65 ಲಕ್ಷ ರೂ. ಬೆಲೆಬಾಳುವ ಮನೆ, ಹುಟ್ಟೂರಿನಲ್ಲಿ ನೂತನವಾಗಿ ಕಟ್ಟಲಾದ ಫಾರ್ಮ್‌ಹೌಸ್, 1 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ಬೈಕ್​ ಇದೆ. ಇದರೊಟ್ಟಿಗೆ ಮಹೀಂದ್ರ ಸ್ಕಾರ್ಪಿಯೋ ಕಾರು ಖರೀದಿಸಲು ಬುಕ್ ಕೂಡ ಮಾಡಲಾಗಿದೆ. ಇಷ್ಟೆಲ್ಲವೂ ಕೇವಲ 22ನೇ ವಯಸ್ಸಿಗೆ ಮತ್ತು ತಿಂಗಳಿಗೆ ಸಿಗುವ 15,000 ರೂ. ಸಂಬಳದಲ್ಲಿ ಮಾಡಲಾಗಿದೆ ಎಂಬುದು ಅಚ್ಚರಿ ಮೂಡಿಸಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶ ಪೊಲೀಸರು, ಚುರುಕಿನ ತನಿಖೆಯಲ್ಲಿ ಆರೋಪಿಯ ಒಟ್ಟು ಆಸ್ತಿಯನ್ನು ಹಂತ ಹಂತವಾಗಿ ಬಯಲಿಗೆಳೆದಿದ್ದಾರೆ. ಸ್ವಾಧೀನಗಳಿಗೆ ಕಾನೂನುಬದ್ಧ ಗಳಿಕೆಯ ಮೂಲಕ ಹಣ ನೀಡಲಾಗಿದೆಯೇ ಅಥವಾ ದೇಣಿಗೆಗಳನ್ನು ದುರುಪಯೋಗ ಪಡಿಸಿಕೊಂಡಿದ್ದಕ್ಕೆ ಸಂಬಂಧಿಸಿವೆಯೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿನೆ ನಡೆಸುತ್ತಿದ್ದಾರೆ.
ಈ ವರ್ಷದ ಏಪ್ರಿಲ್‌ನಲ್ಲಿ ತನ್ನ ಹುಟ್ಟೂರಿನಲ್ಲಿ ಬರೋಬ್ಬರಿ ಏಳು ದಿನಗಳ ಕಾಲ ಅದ್ದೂರಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದ ಅನುಕಲ್ಪ್​, ಪ್ರಮುಖ ವ್ಯಕ್ತಿಗಳನ್ನೇ ಕರೆಸಿದ್ದ ಎಂಬ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈತನ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆ ಜೊತೆಗೆ ಏರಿಕೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಇದನ್ನೇ ಬಲವಾದ ಸಾಕ್ಷಿಯನ್ನಾಗಿ ಪರಿಗಣಿಸದೆ, ಸೂಕ್ತ ತನಿಖೆಯ ಮೂಲಕ ಪತ್ತೆಹಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ತಿ ದಾಖಲೆಗಳ ಜತೆಗೆ, ಬ್ಯಾಂಕ್ ಖಾತೆಗಳು ಮತ್ತು ಎಲ್ಲೆಲ್ಲಿ ಹೂಡಿಕೆ ಮಾಡಲಾಗಿದೆ, ವಿಮಾ ಪಾಲಿಸಿಗಳು, ಲಾಕರ್‌ಗಳು ಮತ್ತು ಇತರ ಹಣಕಾಸು ಮೂಲಗಳು ಸೇರಿದಂತೆ ಹೆಚ್ಚಿನ ಮೌಲ್ಯದ ವಹಿವಾಟುಗಳನ್ನು ಖಾಕಿ ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು