9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ರಾಮ ಮಂದಿರ 140 ಕೋಟಿ ಜನರದ್ದು; ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

17/01/2024, 14:05

ಉಡುಪಿ(repterkarnataka.com): ರಾಮ ಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು.
ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿಯೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಜನರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು