5:39 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಕಾರಣ ಏನು? ಅವರ ಮಾತಿನಲ್ಲೇ ಕೇಳಿ!

05/06/2026, 11:42

ಬೆಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರಣ ವಲ್ಲ, ನೋವು ಎಂದಿದ್ದಾರೆ.
ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮಂತ್ರಿಗಳು ತಮ್ಮ ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಮೀಟಿಂಗ್ ಆರಂಭಿಸಿದ್ರೆ, ಇತ್ತ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ ಹಾಗೂ ಹೊಸ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ನಾನು ಯಾರ ಬಳಿಯೂ ಮಂತ್ರಿ ಮಾಡಿ ಎಂದು ಕೇಳಿರಲಿಲ್ಲ. ಹೈಕಮಾಂಡ್ ಭೇಟಿ ಮಾಡಿಲ್ಲ, ಡಿಕೆ ಶಿವಕುಮಾರ್ ಬಳಿ ನಾನು ಮಂತ್ರಿ ಎಂದಿ ಕೇಳಿಲ್ಲ. ಆದರೆ ಇದೀಗ ಎರಡನೇ ಬಾರಿ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಎರಡು ಬಾರಿ ಹೀಗೆ ಬೇರೆ ಖಾತೆ ನೀಡಿದ್ದಾರೆ. ಇದು ನೋವು ತಂದಿದೆ ಎಂದಿದ್ದಾರೆ.
ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕಳುಹಿಸಿದ್ದಾರೆ. ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡುವುದಾಗಿ ಹೇಳಿ ಬಳಿಕ ಮಾತು ತಪ್ಪಿದಾಗ ನೋವಾಗಿದೆ. ಹೀಗಾಗಿ ಈ ಕುರಿತು ನಡೆಸಿದ ಮಾತುಕತೆಯಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ತೀವ್ರ ನೋವುಂಟಾಗಿರುವುದು ಸ್ಪಷ್ಟವಾಗಿದೆ. ಇದೇ ನೋವು, ಬೇಸರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಖಾತೆ ಹಂಚಿಕೆ, ಬದಲಾವಣೆ ನಡುವೆ ಏನೆಲ್ಲಾ ಆಗಿದೆ ಎಂದು ಹೇಳಲು ಆಗಲ್ಲ. ಹೈಕಮಾಂಡ್ ಜೊತೆ ಮಾತುಕತೆ, ಮನವೊಲಿಕೆ ಮಾತಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನನ್ನ ರಾಜೀನಾಮೆ ನನ್ನ ಕುಟುಂಬಕ್ಕೆ ಗೊತ್ತಿಲ್ಲ. ಯಾರ ಜೊತೆಗೆ ಚರ್ಚಿಸುವ ಅಗತ್ಯವಿಲ್ಲ ಎಂದಿದ್ದಾರೆ.


ಈಗೀನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಸಂಸದ ಸುರೇಶ್ ಅವರು ನಮ್ಮ ಮನೆಗೆ ಬಂದಿದ್ದರು. ಮುಂದೆ ನಾನೇ ಸಿಎಂ ಆಗ್ತೇನೆ ನಿಂಗೆ ಬೆಂಗಳೂರು ನಗರಾಭಿವೃದ್ಧಿ ಕೊಡುತ್ತೇನೆ ಎಂದಿದ್ದರು. ಆದರೆ ಮಾತು ಕೊಟ್ಟು ಪದೇ ಪದೇ ಈ ರೀತಿ ಮಾತು ಬದಲಾಯಿಸಿದಾಗ ಬೇಸರ ಆಗುತ್ತದೆ ಎಂದಿದ್ದಾರೆ.
ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ.ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು